ADVERTISEMENT

ಕಾಶಿ ವಿಶ್ವನಾಥ ಧಾಮ: ಹೊಸ ವರ್ಷದ ಮೊದಲ ದಿನ 5 ಲಕ್ಷ ಮಂದಿ ಭೇಟಿ

ಪಿಟಿಐ
Published 2 ಜನವರಿ 2022, 20:10 IST
Last Updated 2 ಜನವರಿ 2022, 20:10 IST
ಇತ್ತೀಚೆಗೆ ಕಾಶಿ ವಿಶ್ವನಾಥ ಧಾಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಇತ್ತೀಚೆಗೆ ಕಾಶಿ ವಿಶ್ವನಾಥ ಧಾಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಉದ್ಘಾಟಿಸಿದ ನವೀಕೃತ ಕಾಶಿ ವಿಶ್ವನಾಥ ಧಾಮಕ್ಕೆ ವರ್ಷದ ಮೊದಲ ದಿನವಾದ ಶನಿವಾರ ಸುಮಾರು 5 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ವಾರಾಣಸಿಯಲ್ಲಿನ ಶಿವನ ದೇವಸ್ಥಾನಕ್ಕೆ ಮಹಾಶಿವರಾತ್ರಿ ದಿನ ಭೇಟಿ ನೀಡುವುದು ಒಳ್ಳೆಯದು ಎಂದು ಭಕ್ತರು ಭಾವಿಸಿದ್ದಾರೆ. ಆದರೆ, ಇದುವರೆಗೂ ಆ ದಿನ ಭಕ್ತರ ಸಂಖ್ಯೆ 2.5 ಲಕ್ಷ ದಾಟಿಲ್ಲ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.