ಶಿಮ್ಲಾ: ಕೋವಿಡ್ 19 ಸೋಂಕಿನಿಂದಗುಣಮುಖರಾಗಿದ್ದ ವ್ಯಕ್ತಿಯೊಬ್ಬರಿಗೆ ಮತ್ತೆ ಕೋವಿಡ್ 19 ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಸೃಷ್ಟಿಸಿದೆ.
‘ಹಿಮಾಚಲ ಪ್ರದೇಶದ ಉನಾ ಮೂಲದ ವ್ಯಕ್ತಿಯಲ್ಲಿ ಶನಿವಾರ ಪಾಸಿಟೀವ್ ವರದಿ ಬಂದಿದೆ. ಅವರು ಈ ಹಿಂದೆ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು,’ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
‘ಉನಾ ಜಿಲ್ಲೆಯ ಒಟ್ಟು ಸೋಂಕಿತರ ಪೈಕಿ ಮೂರರಲ್ಲಿ ಒಬ್ಬರಿಗೆ ಕೋವಿಡ್ 19 ಕಾಯಿಲೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಪ್ರಕರಣಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ,’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರೊಂದಿಗೆ ಉನಾ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ. ಹಿಮಾಚಲ ಪ್ರದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 40 ಆಗಿದೆ.
ಈ ಮಧ್ಯೆ ತಬ್ಲೀಗಿ ಜಮಾತ್‌ಗೆ ಹೋಗಿ ಬಂದಿದ್ದ ಉನಾ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಅಧಿಕಾರಿಗಳು ಈ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ‘ಜಮಾತ್‌ಗೆ ಹೋಗಿ ಬಂದು ಒಂದು ತಿಂಗಳ ನಂತರ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಬಹುಶಃ ಸೋಂಕಿತ ಬೇರೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿರಬಹುದು. ಅವರನ್ನು ಪತ್ತೆ ಮಾಡುತ್ತಿದ್ದೇವೆ,‘ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.