ADVERTISEMENT

ಮಹಾರಾಷ್ಟ್ರ: ದಶಕದಿಂದ ನಡೆಯದ ನೇಮಕಾತಿ ಪ್ರಕ್ರಿಯೆ, ಅಳಿವಿನತ್ತ ಕನ್ನಡ ಶಾಲೆಗಳು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ ಗಡಿ ಭಾಗದ ಸರ್ಕಾರಿ ಕನ್ನಡ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ಹಲವು ವರ್ಷಗಳಿಂದ ಶಿಕ್ಷಕರನ್ನು ನೇಮಕ ಮಾಡದ ಕಾರಣ ಹಲವು ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿವೆ.

ಕನ್ನಡ ಶಾಲೆಗಳ ಕಡೆಗಣನೆ ಕುರಿತು ಗಡಿನಾಡ ಕನ್ನಡ ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಕನ್ನಡ ಶಾಲೆಗಳಲ್ಲಿ ಬಹುತೇಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕನ್ನಡ ಭಾಷೆ ಹಾಗೂ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರ ಕೊರತೆಯ ಕಾರಣ ಮಕ್ಕಳು ಕನ್ನಡ ಶಾಲೆಗಳಿಂದ ವಿಮುಖ ವಾಗುತ್ತಿದ್ದಾರೆ. ಸಾಂಗಲಿ ಮತ್ತು ಸೊಲ್ಲಾಪುರ ಜಿಲ್ಲೆಗಳ ಗಡಿ ಭಾಗಗಳಲ್ಲಿ ಶಿಕ್ಷಕರ ಸಮಸ್ಯೆ ತೀವ್ರವಾಗಿದೆ. ಮಹಾರಾಷ್ಟ್ರ ಸರ್ಕಾರ 2010ರಲ್ಲಿ ಕನ್ನಡ ಶಿಕ್ಷಕರನ್ನು ನೇಮಕ ಮಾಡಿತ್ತು. ಆ ನಂತರ ನೇಮಕಾತಿ ಪ್ರಕ್ರಿಯೆಗಳೇ ನಡೆದಿಲ್ಲ. ಆದರೆ, ಮರಾಠಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಕನ್ನಡ ಶಾಲೆಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. 

ಮಹಾರಾಷ್ಟ್ರದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಮರಾಠಿ ಮಾಧ್ಯಮದಲ್ಲಿಯೇ ಬರೆಯಬೇಕಿದೆ. ಹಾಗಾಗಿ, ಟಿಇಟಿ  ಉತ್ತೀರ್ಣರಾದ ಕನ್ನಡಿಗರ ಸಂಖ್ಯೆ ಕಡಿಮೆ ಇದೆ. ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಇಟಿ ಕಡ್ಡಾಯ ಮಾಡಬಾರದು ಎಂದು ಶಿಕ್ಷಕ ಸಂಘಟನೆಯ ಮುಖಂಡ ಅಮೋಲ್‌ ಶಿಂಧೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.