ಹೈಕೋರ್ಟ್
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ 25,753 ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಇದರಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರಕ್ಕೆ ಹಿನ್ನಡೆಯಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಹೈಕೋರ್ಟ್ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಯಾವುದೇ ಸೂಕ್ತ ಕಾರಣಗಳು ಕಂಡು ಬಂದಿಲ್ಲ, ನೇಮಕಾತಿಯಲ್ಲಿ ಆಕ್ರಮಗಳು ನಡೆದಿವೆ, ಇನ್ನು ಮೂರು ತಿಂಗಳ ಒಳಗೆ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.