ADVERTISEMENT

Delhi Red Fort blast: ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಅಮಿತ್ ಶಾ

ಪಿಟಿಐ
Published 11 ನವೆಂಬರ್ 2025, 6:48 IST
Last Updated 11 ನವೆಂಬರ್ 2025, 6:48 IST
<div class="paragraphs"><p>ದೆಹಲಿ ಸ್ಫೋಟ ಹಾಗೂ ಅಮಿತ್ ಶಾ</p></div>

ದೆಹಲಿ ಸ್ಫೋಟ ಹಾಗೂ ಅಮಿತ್ ಶಾ

   

–ಪಿಟಿಐ ಚಿತ್ರ

ನವದೆಹಲಿ: ದೆಹಲಿಯ ಕೆಂಪು ಕೋಟೆ ಸಮೀಪ ಭಾರಿ ಸ್ಫೋಟ ಸಂಭವಿಸಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭದ್ರತಾ ಸ್ಥಿತಿಯನ್ನು ಅವಲೋಕನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ವಿಭಾಗದ ನಿರ್ದೇಶಕ ತಪನ್ ದೇಖಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೊಲ್ಚಾ ಹಾಗೂ ಎನ್ಐಎ ಪೊಲೀಸ್ ಮಹಾನಿರ್ದೇಶಕ ಸದಾನಂದ್ ವಸಂತ್ ದಾಟೆ ಇದ್ದರು.

ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಅವರು ಆನ್‌ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ, ಸ್ಫೋಟದ ಬಳಿಕದ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ವಿಸ್ತೃತ ಮಾಹಿತಿ ನೀಡಿದ್ದಾರೆ.

ಉನ್ನತ ತನಿಖಾ ತಂಡಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿವೆ, ಪ್ರಕರಣದ ಆಳ–ಅಗಲಕ್ಕೆ ಅವರು ಇಳಿಯಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸೋಮವಾರ ಸಂಜೆ ಕೆಂಪು ಕೋಟೆಯ ಬಳಿಯ ಮೆಟ್ರೊ ನಿಲ್ದಾಣದ ಸಮೀಪದ ಸಿಗ್ನಲ್‌ನಲ್ಲಿ ನಿಧಾನವಾಗಿ ಸಂಚರಿಸುತ್ತಿದ್ದ ಕಾರru ಸ್ಪೋಟಗೊಂಡಿತ್ತು. ಘಟನೆಯಲ್ಲಿ 12 ಮಂದಿ ಅಧಿಕ ಮಂದಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.