
ನವದೆಹಲಿ: ಕೆಂಪು ಕೋಟೆಯ ಬಳಿ ಸೋಮವಾರ ನಡೆದ ಕಾರು ಸ್ಪೋಟದ ಸಮಯದ ಸಿಸಿಟಿವಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸ್ಪೋಟಕ್ಕೂ ಮುನ್ನ ಟ್ರಾಫಿಕ್ ಸಿಗ್ನಲ್ ಬಳಿ ವಾಹನ ದಟ್ಟನೆಯನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.
ಸೋಮವಾರ ಸಂಜೆ 6.50ರ ಸುಮಾರಿಗೆ ಘಟನೆ ಜರುಗಿದ್ದು, ಸಿಸಿಟಿವಿ ದೃಷ್ಯಾವಳಿಗಳು ಘಟನೆ ನಡೆದ ಸಮಯವನ್ನು ಖಾತರಿಪಡಿಸಿವೆ.
ಘಟನೆಯ ವೇಳೆ ಒಮ್ಮೆಗೆ ಬೆಂಕಿ ಹೊತ್ತಿಕೊಂಡಿದ್ದು, ಜನರು ಭಯಭೀತರಾಗಿ ಜೀವ ಭಯದಿಂದ ಗಾಬರಿಗೊಳಗಾಗಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಸ್ಪೋಟಗೊಂಡ ಕಾರನ್ನು ಫರಿದಾಬಾದ್‌ನ ಅಲ್ –ಫಲಾಹ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಉಮರ್ ನಬಿ ಚಲಾಯಿಸುತ್ತಿದ್ದ ಎಂದು ತನಿಖಾ ತಂಡಗಳು ಅನುಮಾನ ವ್ಯಕ್ತಪಡಿಸಿವೆ.
ಘಟನೆಯಲ್ಲಿ 12 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.