
ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು (ಸೋಮವಾರ) ದೆಹಲಿ ನ್ಯಾಯಾಲಯದ ಎದುರು ಹಾಜರುಪಡಿಸಿದೆ.
ಪ್ರಮುಖ ಆರೋಪಿ ಅಮೀರ್ ರಶೀದ್ ಅಲಿಯನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ರಶೀದ್ ಅಲಿಯನ್ನು 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ದೆಹಲಿ ನ್ಯಾಯಾಲಯ ಆದೇಶಿಸಿದೆ .
'ಸ್ಫೋಟಗೊಂಡ ಕಾರು ಅಮೀರ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್‌ನ ಸಂಬೂರಾ ನಿವಾಸಿ' ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದರು.
‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್, ಆತ್ಮಾಹುತಿ ಬಾಂಬರ್ ಡಾ.ಉಮರ್ ನಬಿ ಜೊತೆ ಸೇರಿ ಸಂಚು ರೂಪಿಸಿದ್ದ. ‘ಕಾರಿನಲ್ಲಿ ಕಚ್ಚಾ ಬಾಂಬ್’ ಬಳಸಿ ಸ್ಫೋಟಿಸುವ ಉದ್ದೇಶದಿಂದ ಕಾರು ಖರೀದಿಗೆ ನೆರವಾಗಲು ಈತ ಕಳೆದ ವರ್ಷ ದೆಹಲಿಗೆ ಬಂದಿದ್ದ’ ಎಂದಿದ್ದರು.
‘ಡಾ.ಉಮರ್ ನಬಿ, ಅಮೀರ್ ಅಲಿ ಕಳೆದ ಕೆಲ ತಿಂಗಳಿನಿಂದ ಸಂಪರ್ಕದಲ್ಲಿದ್ದರು. ನ.10ರಂದು ನಡೆಸಿದ ದಾಳಿಗಾಗಿ ಸ್ಫೋಟಕ ಸಿದ್ಧಪಡಿಸುವಲ್ಲಿ ನಿರತರಾಗಿದ್ದರು’ ಎಂದು ಎನ್‌ಐಎ ಶಂಕಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.