
ದೆಹಲಿ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಬಳಿ ಕಾರುಗಳು ಭಾರಿ ಸ್ಪೋಟ
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಇರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಗೇಟ್ ನಂ.1ರಲ್ಲಿ ನಿಲ್ಲಿಸಿದ್ದ ಹಲವು ಕಾರುಗಳು ಸ್ಫೋಟಗೊಂಡಿವೆ.
8 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಇದು ಭಯೋತ್ಪಾದನೆ ಕೃತ್ಯ ಇರಬಹುದು ಎಂದು ಶಂಕಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಪ್ರಕರಣದ ಬೆನ್ನಲ್ಲೇ ರಾಷ್ಟ್ರದಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ.
‘ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ. ಅಕ್ಕಪಕ್ಕದಲ್ಲಿದ್ದ ಕಾರುಗಳು, ಇತರ ವಾಹನಗಳಿಗೂ ಬೆಂಕಿ ತಗುಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಕೆಂಪು ಕೋಟೆ ಬಳಿ ಕಾರು ಸ್ಫೋಟವಾದ ಬೆನ್ನಲ್ಲೇ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.