
ಪಿಟಿಐ
ನವದೆಹಲಿ: ಬಳಿ ಭೀಕರ ಸ್ಫೋಟ ಸಂಭವಿಸಿದ ನಾಲ್ಕು ದಿನಗಳ ನಂತರ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಎರಡು ಪ್ರವೇಶ ದ್ವಾರಗಳನ್ನು ಶನಿವಾರ ತೆರೆಯಲಾಗಿದೆ.
ಭದ್ರತಾ ಕಾರಣಕ್ಕಾಗಿ ನಾಲ್ಕು ದಿನಗಳಿಂದ ಮುಚ್ಚಲಾಗಿದ್ದ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಗೇಟ್ ನಂಬರ್ ಎರಡು ಮತ್ತು ಮೂರನ್ನು ತೆರೆಯಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್‌ಸಿ) ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದೆ.
ಸ್ಫೋಟ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಲಾಕ್‌ಡೌನ್ ವಿಧಿಸಲಾಗಿತ್ತು. ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಸಲುವಾಗಿ ಇನ್ನೂ ಕೆಲವು ದಿನಗಳು ಈ ಪ್ರದೇಶದಲ್ಲಿ ಹೆಚ್ಚು ಚಲನವಲನಗಳನ್ನು ನಿರ್ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.