ADVERTISEMENT

ಪೆಗಾಸಸ್ ಪ್ರಕರಣ: ಸಾಮಾಜಿಕ ಮಾಧ್ಯಮ ಚರ್ಚೆಗಳಿಂದ ದೂರವಿರಿ ಎಂದ ಸುಪ್ರೀಂ ಕೋರ್ಟ್

ಡೆಕ್ಕನ್ ಹೆರಾಲ್ಡ್
Published 10 ಆಗಸ್ಟ್ 2021, 6:52 IST
Last Updated 10 ಆಗಸ್ಟ್ 2021, 6:52 IST
ಸುಪ್ರೀಂ ಕೋರ್ಟ್ (ಪಿಟಿಐ ಚಿತ್ರ)
ಸುಪ್ರೀಂ ಕೋರ್ಟ್ (ಪಿಟಿಐ ಚಿತ್ರ)   

ನವದೆಹಲಿ: ಪೆಗಾಸಸ್‌ ಕುತಂತ್ರಾಂಶಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಮಾಡುವುದರಿಂದ ದೂರವಿರಿ. ಶಿಸ್ತಿನಿಂದ ವರ್ತಿಸಿ ಎಂದು ಪ್ರಕರಣಕ್ಕೆ ಸಂಬಂಧಪಟ್ಟ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

‘ನಾವು ಚರ್ಚೆ ಮಾಡುವುದಕ್ಕೆ ವಿರುದ್ಧವಿಲ್ಲ. ಆದರೆ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಅದು ಇಲ್ಲಿಯೇ ಚರ್ಚೆಯಾಗಬೇಕು’ ಕೋರ್ಟ್‌ ಹೇಳಿದೆ.

ವಿಚಾರಣೆ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದಿಂದ ಸೂಚನೆಗಳನ್ನು ಪಡೆಯಲು ಕಾಲಾವಕಾಶ ಬೇಕೆಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರಿದರು.

ಮುಂದಿನ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಆಗಸ್ಟ್ 16ಕ್ಕೆ ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.