ADVERTISEMENT

ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳು ಒಂದಾಗಬೇಕು: ಮಮತಾ ಬ್ಯಾನರ್ಜಿ

ಪಿಟಿಐ
Published 2 ಫೆಬ್ರುವರಿ 2022, 13:23 IST
Last Updated 2 ಫೆಬ್ರುವರಿ 2022, 13:23 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬುಧವಾರ ಹೇಳಿದರು.

ಪಕ್ಷದ ಮುಖ್ಯಸ್ಥೆಯಾಗಿ ಅವಿರೋಧವಾಗಿ ಆಯ್ಕೆಗೊಂಡ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರತಿಯೊಂದು ಪ್ರಾದೇಶಿಕ ಪಕ್ಷವೂ ಬಿಜೆಪಿ ವಿರುದ್ಧ ಹೋರಾಡಬೇಕು. ಬಿಜೆಪಿಯನ್ನು ಸೋಲಿಸಬೇಕು ಎಂಬುದೇ ನಮ್ಮ ಧ್ಯೇಯ. ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಅನ್ನು ಸೋಲಿಸಲು ನಮಗೆ ಸಾಧ್ಯವಾಗಿದೆ ಎಂದಾದರೆ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನೂ ನಾವು ಸೋಲಿಸಲು ಸಾಧ್ಯ’ ಎಂದು ಹೇಳಿದರು.

ADVERTISEMENT

ಕಾಂಗ್ರೆಸ್‌ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ತನ್ನ ಅಹಂನಿಂದಾಗಿ ಆ ಪಕ್ಷ ಹಿಂದೆ ಕೂರಲು ಇಚ್ಛಿಸಿದರೆ, ಅದಕ್ಕೆ ನಮ್ಮ ಪಕ್ಷವನ್ನು ದೂರಬಾರದು. ಅಗತ್ಯ ಎನಿಸಿದರೆ ಟಿಎಂಸಿ ಏಕಾಂಗಿಯಾಗಿಯೇ ಬಿಜೆಪಿ ವಿರುದ್ಧ ಹೋರಾಡಲಿದೆ ’ ಎಂದರು.

‘ಮೇಘಾಲಯ ಹಾಗೂ ಚಂಡೀಗಡದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಕಾಂಗ್ರೆಸ್‌ ನೆರವಾಗಿದೆ’ ಎಂದೂ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.