ADVERTISEMENT

20 ವರ್ಷಕ್ಕಿಂತ ಹಳೆಯ ವಾಹನಗಳ ನೋಂದಣಿ ನವೀಕರಣ ಶುಲ್ಕ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 16:02 IST
Last Updated 22 ಆಗಸ್ಟ್ 2025, 16:02 IST
-
-   

ನವದೆಹಲಿ: ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯವು, 20 ವರ್ಷಕ್ಕಿಂತಲೂ ಹಳೆಯದಾದ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ಹೆಚ್ಚಿಸಿದ್ದು, ಈ ಕುರಿತು ಅಧಿಸೂಚನೆ ಪ್ರಕಟಿಸಿದೆ.

ಲಘು ಮೋಟಾರು ವಾಹನಗಳ(ಎಲ್‌ಎಂವಿ) ನೋಂದಣಿ ನವೀಕರಣ ಶುಲ್ಕವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ದ್ವಿಚಕ್ರ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ, ತ್ರಿಚಕ್ರ/ನಾಲ್ಕು ಚಕ್ರ ವಾಹನಗಳ ನವೀಕರಣ ಶುಲ್ಕವನ್ನು ₹3,500 ದಿಂದ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ.

ADVERTISEMENT

ಆಮದು ಮಾಡಿಕೊಂಡಿರುವ ದ್ವಿಚಕ್ರ/ತ್ರಿಚಕ್ರ ವಾಹನಗಳ ನೋಂದಣಿ ನವೀಕರಣ ಶುಲ್ಕವು ₹20 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ, ಆಮದು ಮಾಡಿಕೊಂಡಿರುವ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಚಕ್ರಗಳ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ₹80 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.