ADVERTISEMENT

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಏ. 28ರಿಂದ ನೋಂದಣಿ ಆರಂಭ

ಪಿಟಿಐ
Published 22 ಏಪ್ರಿಲ್ 2021, 12:21 IST
Last Updated 22 ಏಪ್ರಿಲ್ 2021, 12:21 IST
ಆರೋಗ್ಯ ಸೇತು
ಆರೋಗ್ಯ ಸೇತು   

ನವದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌–19 ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆ ಏಪ್ರಿಲ್‌ 28ರಿಂದ ಆರಂಭವಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೋವಿನ್‌ ವೇದಿಕೆ ಹಾಗೂ ಆರೋಗ್ಯ ಸೇತು ಆ್ಯಪ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ದಾಖಲೆಗಳನ್ನು ಸಲ್ಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದೂ ತಿಳಿಸಿದೆ.

ಮೂರನೇ ಹಂತದ ಲಸಿಕಾ ಕಾರ್ಯಕ್ರಮದ ಅಂಗವಾಗಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.