ADVERTISEMENT

Rekha Sworn: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ

ಪಿಟಿಐ
Published 20 ಫೆಬ್ರುವರಿ 2025, 7:04 IST
Last Updated 20 ಫೆಬ್ರುವರಿ 2025, 7:04 IST
<div class="paragraphs"><p>ರೇಖಾ ಗುಪ್ತಾ</p></div>

ರೇಖಾ ಗುಪ್ತಾ

   

ನವದೆಹಲಿ: ಶಾಲಿಮಾರ್ ಬಾಗ್ ಕ್ಷೇತ್ರದ ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್‌ ಗವರ್ನರ್ ವಿ.ಕೆ. ಸಕ್ಸೇನಾ ಅವರು ಪ್ರಮಾಣವಚನ ಬೋಧಿಸಿದರು.

ADVERTISEMENT

ರೇಖಾ ಗುಪ್ತಾ ಅವರೊಂದಿಗೆ ಆರು ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಿದರು.

ರೇಖಾ ಗುಪ್ತಾ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆ ಕಪಿಲ್‌ ಮಿಶ್ರಾ, ಪಂಕಜ್‌ ಕುಮಾರ್‌ ಸಿಂಗ್‌, ರವೀಂದರ್‌ ಸಿಂಗ್‌, ಪರ್ವೇಶ್‌ ಸಿಂಗ್‌, ಆಶಿಸ್‌ ಸೂದ್‌, ಮಜಿಂದರ್‌ ಸಿಂಗ್‌ ಸಿರ್ಸಾ ಕೂಡ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟದ ಸಚಿವರು, ಬಿಜೆಪಿಯ ಮುಖ್ಯಮಂತ್ರಿಗಳು, ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದರು.

ಸಾವಿರಾರು ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆಟೋ ಚಾಲಕರು, ಕೊಳೆಗೇರಿ ನಿವಾಸಿಗಳು ಮತ್ತು ಕೇಂದ್ರ ಯೋಜನೆಗಳ ಫಲಾನುಭವಿಗಳು ಆಗಮಿಸಿದ್ದರು.

32 ವರ್ಷಗಳ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ ನಾಲ್ಕನೇ ಮಹಿಳೆ ರೇಖಾ ಗುಪ್ತಾ. ಬಿಜೆಪಿಯ ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದಿತ್ತು. ಫೆ.8ರಂದು ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಎಎಪಿ 22 ಸ್ಥಾನಗಳನ್ನು ಗೆದ್ದು ದಶಕಗಳ ಆಡಳಿತವನ್ನು ಕೊನೆಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.