ADVERTISEMENT

ದೈನಂದಿನ ಆಮ್ಲಜನಕ ಉತ್ಪಾದನೆ ಸಾವಿರ ಟನ್‌ಗೆ ಹೆಚ್ಚಿಸಿದ ರಿಲಯನ್ಸ್

ಪಿಟಿಐ
Published 1 ಮೇ 2021, 10:36 IST
Last Updated 1 ಮೇ 2021, 10:36 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ವೈದ್ಯಕೀಯ ಆಮ್ಲಜನಕದ (ಆಕ್ಸಿಜನ್) ದೈನಂದಿನ ಉತ್ಪಾದನೆಯನ್ನು ಉದ್ಯಮಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ 1,000 ಟನ್‌ಗೆ ಹೆಚ್ಚಿಸಿದೆ.

ಇದರೊಂದಿಗೆ ದೇಶದಲ್ಲಿ ಒಂದೇ ಕಡೆಯಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಆಮ್ಲಜನಕ ಉತ್ಪಾದಿಸುವ ಕಂಪನಿಯಾಗಿ ಹೊರಹೊಮ್ಮಿದೆ.

ಆಮ್ಲಜನಕ ಉತ್ಪಾದನೆಯನ್ನು ಹೆಚ್ಚಿಸಲಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇ 11ರಷ್ಟನ್ನು ಉತ್ಪಾದಿಸಲಾಗುತ್ತಿದೆ. ಪ್ರತಿ 10 ರೋಗಿಗಳಲ್ಲಿ ಒಬ್ಬರಿಗೆ ನೀಡುವಷ್ಟು ಆಮ್ಲಜನಕ ಉತ್ಪಾದಿಸಲಾಗುತ್ತಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಗುಜರಾತ್‌ನ ಜಾಮ್‌ನಗರದಲ್ಲಿ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ಉತ್ಪಾದನೆ ಮತ್ತು ಸಾಗಾಟದ ಬಗ್ಗೆ ಅಂಬಾನಿ ಅವರೇ ಖುದ್ದು ಮೇಲುಸ್ತುವಾರಿ ವಹಿಸಿದ್ದಾರೆ ಎಂದು ಕಂಪನಿ ತಿಳಿಸಿದೆ.

ಏಪ್ರಿಲ್‌ನಲ್ಲಿ ಕಂಪನಿಯು 15,000 ಟನ್‌ ಆಮ್ಲಜನಕವನ್ನು ಪೂರೈಕೆ ಮಾಡಿತ್ತು. 24 ಕಂಟೇನರ್‌ಗಳನ್ನು ಸೌದಿ ಅರೇಬಿಯಾ, ಜರ್ಮನಿ, ಬೆಲ್ಜಿಯಂ, ನೆದರ್ಲೆಂಡ್ಸ್ ಮತ್ತು ಥಾಯ್ಲೆಂಡ್‌ಗಳಿಗೆ ಕಳುಹಿಸಿಕೊಟ್ಟಿತ್ತು. ಭಾರತಕ್ಕೆ ಹೆಚ್ಚುವರಿಯಾಗಿ 500 ಟನ್‌ ಒದಗಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.