ADVERTISEMENT

ಧಾರ್ಮಿಕ ಭಾವನೆಗೆ ಧಕ್ಕೆ ತರುವ ಪೋಸ್ಟ್‌: 200ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 10:33 IST
Last Updated 15 ಸೆಪ್ಟೆಂಬರ್ 2025, 10:33 IST
<div class="paragraphs"><p>ಸಾಮಾಜಿಕ ಜಾಲತಾಣ</p></div>

ಸಾಮಾಜಿಕ ಜಾಲತಾಣ

   

ರಾಯಿಟರ್ಸ್ ಚಿತ್ರ

ಶಹಜಹಾನ್‌ಪುರ (ಉತ್ತರಪ್ರದೇಶ): ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದಕ್ಕಾಗಿ ಶಹಜಹಾನ್‌ಪುರದಲ್ಲಿ ಭುಗಿಲೆದ್ದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸುಮಾರು 200ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ 45 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಬಳಿಕ ಪ್ರತಿಭಟನೆಗಳು ಭುಗಿಲೆದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿ 9ಗಂಟೆ ಸುಮಾರಿಗೆ ಪ್ರತಿಭಟನಕಾರರು ಪೊಲೀಸ್ ಠಾಣೆಗೆ ಪ್ರವೇಶಿಸಲು ಪ್ರಯತ್ನಿಸಿದರು. ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ಹಿಂಸಾತ್ಮಕವಾಗಿ ತಿರುಗಿತ್ತು ಘೋಷಣೆಗಳನ್ನು ಕೂಗಿದರು ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಕ್ಕಾಗಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದರು. ಆ ಪೋಸ್ಟ್‌ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ವ್ಯಕ್ತಿಗಳ ವಿರುದ್ಧವು ಪ್ರಕರಣ ದಾಖಲಿಸಲಾಗಿದೆ ಎಂದು ಶಹಜಹಾನ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಜಾತಿ, ಧರ್ಮ ಅಥವಾ ಯಾರ ವಿರುದ್ಧವೂ ಕಾಮೆಂಟ್‌ಗಳನ್ನು ಮಾಡದಂತೆ ನಾವು ಜನರಲ್ಲಿ ಮನವಿ ಮಾಡಿದ್ದೇವೆ. ಕೋಮು ಸಾಮರಸ್ಯವನ್ನು ಹಾಳುಮಾಡುವ ಯಾವುದೇ ಪೋಸ್ಟ್‌ಗಳನ್ನು ಮಾಡಬಾರದು. ಆದಾಗ್ಯೂ, ನಮ್ಮ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡವು ಅವಹೇಳನಕಾರಿ ಪೋಸ್ಟ್ ಅನ್ನು ಪೋಸ್ಟ್ ಮಾಡಿದ ಅಥವಾ ಫಾರ್ವರ್ಡ್ ಮಾಡಿದವರ ಮೇಲೆ ಕಣ್ಣಿಟ್ಟಿದೆ ಎಂದು ದ್ವಿವೇದಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರತಿಭಟನಾಕಾರರನ್ನು ಗುರುತಿಸಲು ತಂಡವನ್ನು ರಚಿಸಲಾಗಿದೆ ದ್ವಿವೇದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.