ಸುಲ್ತಾನ್‌ಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನನ್ನು ರಾಹುಲ್ ಪರ ವಕೀಲರು ಮಂಗಳವಾರ ಪಾಟೀಸವಾಲು ವಿಚಾರಣೆಗೆ ಒಳಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಹುಲ್ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ನೀಡಿದ್ದ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ.
ಮಿಶ್ರಾ ಪರ ವಕೀಲರಾದ ಸಂತೋಷ್ ಕುಮಾರ್ ಪಾಂಡೆ ಈ ಬಗ್ಗೆ ಮಾಹಿತಿ ನೀಡಿದ್ದು, ‘ಪಿತಾಂಬರಪುರ ಕಾಲಾ ನಿವಾಸಿ ಅನಿಲ್ ಮಿಶ್ರಾ ಎಂಬವರು ಪ್ರಕರಣದ ಸಾಕ್ಷಿದಾರರಾಗಿದ್ದು, ಅವರು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ರಾಹುಲ್ ಪರ ವಕೀಲರು ಅವರನ್ನು ಪಾಟೀಸವಾಲು ವಿಚಾರಣೆಗೆ ಒಳಪಡಿಸಿದ್ದಾರೆ’ ಎಂದಿದ್ದಾರೆ.
ನ್ಯಾಯಾಲಯವು ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದ್ದು, ಅದೇ ದಿನ ಪಾಟೀಸವಾಲು ಮುಂದುವರಿಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.