ನವದೆಹಲಿ: ಭಾರತದ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ಆ ಬಗ್ಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದೆ ಇರುವುದಕ್ಕೆ ಮಧ್ಯಪ್ರದೇಶದ ಸಚಿವ ಕನ್ವರ್ ವಿಜಯ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆ ತೆಗೆದುಕೊಂಡಿತು.
ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯಾ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ನ್ಯಾಯಾಲಯದ ತಾಳ್ಮೆಯನ್ನು ವಿಜಯ್ ಪರೀಕ್ಷಿಸುತ್ತಿದ್ದಾರೆ ಎಂದಿದೆ. ಅಲ್ಲದೇ, ವಿಜಯ್ ಅವರ ನಡವಳಿಕೆಯು ಅವರ ಉದ್ದೇಶ ಹಾಗೂ ಪ್ರಾಮಾಣಿಕತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ ಎಂದೂ ಹೇಳಿದೆ.
ಸಚಿವ ವಿಜಯ್ ಪರ ಹಾಜರಾಗಿದ್ದ ವಕೀಲರು, ‘ವಿಜಯ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಆ ವಿಡಿಯೊ ಆನ್‌ಲೈನ್‌ನಲ್ಲಿದೆ. ಅದನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗುವುದು’ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.