ರಾಮದಾಸ್ ಅಠಾವಳೆ
ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಜೌರಂಗಜೇಬನ ಸಮಾಧಿಯನ್ನು ಕೆಡವಬೇಕೆಂಬ ಬೇಡಿಕೆಗೆ ಕೇಂದ್ರ ಸಚಿವ ರಾಮದಾಸ್ ಅಠವಳೆ ವಿರೋಧ ವ್ಯಕ್ತಪಡಿಸಿದ್ದು, ಅದನ್ನು ತೆಗೆದುಹಾಕುವುದರಿಂದ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ್ದಾರೆ.
ಈ ವಿಷಯದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಷಯವನ್ನು ರಾಜಕೀಯಗೊಳಿಸಬಾರದು’ ಎಂದು ಅವರು ಹೇಳಿದ್ದಾರೆ.
ಛತ್ರಪತಿ ಸಂಭಾಜಿನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಬೇಕೆಂದು ಕೆಲವು ಬಲಪಂಥೀಯ ಸಂಘಟನೆಗಳು ಕರೆ ನೀಡಿವೆ.
ಸಮಾಧಿಯನ್ನು ತೆಗೆದುಹಾಕಲು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಂಘಟನೆಗಳು ನಾಳೆ (ಸೋಮವಾರ) ರಾಜ್ಯ ಸರ್ಕಾರಕ್ಕೆ ನಿವೇದನ ಪತ್ರವನ್ನು ಸಲ್ಲಿಸಲು ಯೋಜಿಸಿವೆ. ಬೇಡಿಕೆ ಈಡೇರಿಸದಿದ್ದರೆ ‘ಕರಸೇವೆ’ ಮತ್ತು ರಾಜ್ಯಾದ್ಯಂತ ಪ್ರತಿಭಟನೆಗಳ ಬಗ್ಗೆ ಎಚ್ಚರಿಕೆ ನೀಡಿವೆ.
ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಸತಾರಾದ ಬಿಜೆಪಿಯ ಸಂಸದ ಉದಯನರಾಜೆ ಭೋಸಲೆ ಅವರು ಛತ್ರಪತಿ ಸಂಭಾಜಿನಗರದಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆಯುವಂತೆ ಕೋರಿದ್ದರು.
ಜೌರಂಗಜೇಬನು ಕ್ರೂರಿಯಾಗಿದ್ದನು ಮತ್ತು ಛತ್ರಪತಿ ಸಂಭಾಜಿ ಮಹಾರಾಜನನ್ನು ಕೊಂದನು ಎಂಬುದು ನಿಜ. ಆದರೆ, ಅವನು ಮರಾಠ ರಾಜ್ಯವನ್ನು ವಶಪಡಿಸಿಕೊಳ್ಳುವಲ್ಲಿ ವಿಫಲನಾದನು. ಅಂತಿಮವಾಗಿ ಮಹಾರಾಷ್ಟ್ರದಲ್ಲಿ ಮರಣ ಹೊಂದಿದನು ಎಂದು ಅಠವಳೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.