ADVERTISEMENT

ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಚಿತ್ರ ತೆಗೆಯಿರಿ: ಚುನಾವಣಾ ಆಯೋಗ

ಪಿಟಿಐ
Published 6 ಮಾರ್ಚ್ 2021, 5:06 IST
Last Updated 6 ಮಾರ್ಚ್ 2021, 5:06 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ತೆಗೆಯುವಂತೆ ಆರೋಗ್ಯ ಸಚಿವಾಲಯಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಈ ಮೊದಲು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಚುನಾವಣಾ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ದೂರು ಸಲ್ಲಿಸಿತ್ತು.

ಆರೋಗ್ಯ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಚುನಾವಣಾ ನೀತಿ ಸಂಹಿತೆಯ ಕೆಲವು ನಿಬಂಧನೆಗಳನ್ನು ಉಲ್ಲಂಘನೆಯಾಗಿರುವ ಬಗ್ಗೆ ಉಲ್ಲೇಖ ಮಾಡಿದ್ದು, ಸಾರ್ವಜನಿಕ ಬೊಕ್ಕಸದ ವೆಚ್ಚದಲ್ಲಿ ಜಾಹೀರಾತಿನ ಬಳಕೆಗೆ ನಿರ್ಬಂಧ ಹೇರಿದೆ.

ADVERTISEMENT

ನಿಕಟ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರುಗಳನ್ನು ಉಲ್ಲೇಖಿಸಿಲ್ಲ. ಆದರೆ ಚುನಾವಣಾ ನೀತಿ ಸಂಹಿತೆ ಹಾಗೂ ಉತ್ತಮ ಸ್ಫೂರ್ತಿ ಪಾಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಸಲಹೆ ಮಾಡಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದೇಚೇರಿಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಎಲ್ಲ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದೆ. ಹಾಗಾಗಿ ಕೋವಿಡ್-19 ಲಸಿಕೆ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿಯ ಚಿತ್ರ ಲಗತ್ತಿಸಿರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿ ಪರಿಗಣಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.