ADVERTISEMENT

ನ.26ರೊಳಗೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದಿದ್ದರೆ, ಹೋರಾಟ ತೀವ್ರ: ಟಿಕಾಯತ್

ಪಿಟಿಐ
Published 1 ನವೆಂಬರ್ 2021, 7:51 IST
Last Updated 1 ನವೆಂಬರ್ 2021, 7:51 IST
ರಾಕೇಶ್ ಸಿಂಗ್ ಟಿಕಾಯತ್
ರಾಕೇಶ್ ಸಿಂಗ್ ಟಿಕಾಯತ್   

ಗಾಜಿಯಾಬಾದ್‌: ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕುರಿತು ನವೆಂಬರ್ 26ರೊಳಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳದಿದ್ದರೆ, ದೆಹಲಿಯಾದ್ಯಂತ ರೈತರ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಹೇಳಿದ್ದಾರೆ.

ಈ ಕುರಿತು ಸೋಮವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಕೇಂದ್ರ ಸರ್ಕಾರಕ್ಕೆ ನವೆಂಬರ್ 26 ರವರೆಗೆ ಸಮಯ ನೀಡಿದ್ದೇವೆ. ನಂತರ ನವೆಂಬರ್ 27 ರಿಂದ, ರೈತರು ಹಳ್ಳಿಗಳಿಂದ ಟ್ರ್ಯಾಕ್ಟರ್‌ಗಳ ಮೂಲಕ ದೆಹಲಿಯ ಗಡಿ ಭಾಗಗಳಲ್ಲಿ ನಡೆಯುತ್ತಿರುವ ಚಳವಳಿಯ ಸ್ಥಳವನ್ನು ತಲುಪಲಿದ್ದಾರೆ. ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಟೆಂಟ್‌ಗಳನ್ನು ಹಾಕಿ, ಬಲವಾದ ಕೋಟೆಯನ್ನೇ ನಿರ್ಮಿಸಲಿದ್ದಾರೆ‘ ಎಂದು ಹೇಳಿದ್ದಾರೆ.

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ದೆಹಲಿಯ ಗಡಿಭಾಗಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ಆರಂಭಿಸಿ ನವೆಂಬರ್ 26ಕ್ಕೆ ಒಂದು ವರ್ಷವಾಗಲಿದೆ. ಗಾಜಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಕೆಯು ಕೂಡ ಪಾಲ್ಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.