ADVERTISEMENT

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ, ಹೃದಯ ವೈಶಾಲ್ಯ ಪ್ರದರ್ಶಿಸಿ

ಕೇಂದ್ರ ಸರ್ಕಾರಕ್ಕೆ ಶಿವಸೇನಾ ಆಗ್ರಹ

ಪಿಟಿಐ
Published 7 ಡಿಸೆಂಬರ್ 2020, 9:49 IST
Last Updated 7 ಡಿಸೆಂಬರ್ 2020, 9:49 IST
ಶಿವಸೇನಾ
ಶಿವಸೇನಾ   

ಮುಂಬೈ: ‘ಕೇಂದ್ರ ಸರ್ಕಾರ ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ರೈತರ ಬಗೆಗಿನ ತನ್ನ ಹೃದಯ ವೈಶಾಲ್ಯ ಪ್ರದರ್ಶಿಸಬೇಕಿದೆ‘ ಎಂದು ಶಿವಸೇನಾ ಹೇಳಿದೆ.

ರೈತರ ಪ್ರತಿಭಟನೆಗೆ ಸ್ಪಂದಿಸದೇ, ಪರಿಸ್ಥಿತಿ ವಿಕೋಪಕ್ಕೆ ತಿರುಗುವಂತೆ ಮಾಡುತ್ತಿರುವ ಕೇಂದ್ರದ ವರ್ತನೆ ಬಗ್ಗೆ ತನ್ನ ಪಕ್ಷದ ಮುಖವಾಣಿ ಪತ್ರಿಕೆ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಆಕ್ಷೇಪಿಸಿರುವ ಶಿವಸೇನಾ, ‘ರೈತರಿಗೆ ಪ್ರತಿಭಟಿಸುವ ಹಕ್ಕಿದೆ‘ ಎಂದು ಹೇಳಿದೆ.

‘ರೈತರು ತಮ್ಮ ಹಕ್ಕಿಗಾಗಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದರೆ, ಅದನ್ನು ಸರ್ಕಾರದ ದಬ್ಬಾಳಿಕೆ ಎಂದು ಭಾವಿಸುತ್ತಾರೆ. ಇಂಥ ವೇಳೆ ಕಾಯ್ದೆಗಳನ್ನು ರದ್ದುಗೊಳಿಸಿದರೆ ಅದು ಸರ್ಕಾರದ ಹೃದಯ ವೈಶಾಲ್ಯವನ್ನು ತೋರಿಸುತ್ತದೆ‘ ಎಂದು ಶಿವಸೇನಾ ಅಭಿಪ್ರಾಯಪಟ್ಟಿದೆ.

ADVERTISEMENT

‘ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ, ರೈತರ ಪರ ಹೋರಾಟಕ್ಕಿಳಿದಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಚರ್ಚೆ ನಡೆಸುವ ಸೌಜನ್ಯ ತೋರಿಸಿದ್ದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಬಹುದಿತ್ತು. ಆದರೆ, ಈಗ ಪರಿಸ್ಥಿತಿ ಹದಗೆಡುತ್ತಿದೆ. ಇವೆಲ್ಲ ಸರ್ಕಾರದ ಕೈಗೊಳ್ಳುತ್ತಿರುವ ತೀರ್ಮಾನಗಳ ಫಲ‘ ಎಂದು ಸೇನಾ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.