ADVERTISEMENT

ಮಹಾರಾಷ್ಟ್ರ: ಮಹಿಳೆ ಮೇಲೆ ಪದೇಪದೇ ಅತ್ಯಾಚಾರ, ವಿಡಿಯೊ ಬಹಿರಂಗ

ಪಿಟಿಐ
Published 22 ಆಗಸ್ಟ್ 2023, 16:54 IST
Last Updated 22 ಆಗಸ್ಟ್ 2023, 16:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಾಲ್ಘರ್ (ಪಿಟಿಐ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಪದೇಪದೇ ಅತ್ಯಾಚಾರ ಎಸಗಿ ಆ ದೃಶ್ಯಗಳನ್ನು ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟ ಘಟನೆ ನಡೆದಿದ್ದು ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ಪ್ರಕರಣದ ಸಂಬಂಧ ಸೆಕ್ಷನ್ 376 (2) (ಒಂದೇ ಮಹಿಳೆಯ ಮೇಲೆ ಪದೇಪದೇ ಅತ್ಯಾಚಾರ) ಭಾರತೀಯ ದಂಡಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಿ ಮತ್ತು ಅಪರಾಧ ಕೃತ್ಯದಲ್ಲಿ ಷಾಮೀಲಾಗಿದ್ದ ಇಬ್ಬರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ವಿವಾಹಿತ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ವಿಡಿಯೊ ಬಹಿರಂಗವಾದ ಬಳಿಕ ಮಹಿಳೆಯು ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ನೀಡಿದ್ದಾರೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.