ಮಾಸ್ಕೊ: ಡಿಎಂಕೆ ಸಂಸದೆ ಕನಿಮೊಳಿ ನೇತೃತ್ವದ ಭಾರತೀಯ ಸಂಸದೀಯ ನಿಯೋಗವನ್ನು ಹೊತ್ತ ವಿಮಾನವು ಸುಮಾರು 40 ನಿಮಿಷ ತಡವಾಗಿ ಡೊಮೊಡೆದೊವೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.
ರಷ್ಯಾದ ರಾಜಧಾನಿ ಮಾಸ್ಕೊವನ್ನು ಗುರಿಯಾಗಿಸಿಕೊಂಡು ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದ ಕಾರಣ ಎಲ್ಲ ವಿಮಾನ ನಿಲ್ದಾಣಗಳನ್ನು ಮುಚ್ಚುವಂತೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ತಾತ್ಕಾಲಿಕ ವಿಮಾನ ನಿರ್ಬಂಧ’ವು 153 ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನ ವಿಳಂಬಕ್ಕೆ ನಿರ್ದಿಷ್ಟ ಕಾರಣವೇನೆಂದು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.