ADVERTISEMENT

73ನೇ ಗಣರಾಜ್ಯೋತ್ಸವ: ದೇಶದ ಗಮನ ಸೆಳೆದ ಕರ್ನಾಟಕದ ’ಜಾನಪದ’ ಸ್ತಬ್ದಚಿತ್ರ

ದೇಶದಲ್ಲಿ 73ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಗಳು ನಡೆಯುತ್ತಿವೆ. ಅಲ್ಲಿನ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ...

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 8:45 IST
Last Updated 26 ಜನವರಿ 2022, 8:45 IST
73ನೇ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ
73ನೇ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ   ಪಿಟಿಐ

ಜಮ್ಮು ಮತ್ತು ಕಾಶ್ಮೀರದಲ್ಲಿ ಗಣರಾಜ್ಯೋತ್ಸವ ಸಂಭ್ರಮ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಕ್ಷಣಾ ಇಲಾಖೆಯ ಕುದುರೆಗಳನ್ನು ವೀಕ್ಷಣೆ ಮಾಡಿದರು

ರಕ್ಷಣಾ ಇಲಾಖೆಯ ಜಾಗ್ವಾರ್‌ ಯುದ್ಧ ವಿಮಾನಗಳ ಹಾರಾಟ...

ರಾಜ್ಯದೆಲ್ಲೆಡೆ ಗಣರಾಜ್ಯೋತ್ಸವ ಆಚರಣೆ

ರಫೇಲ್‌ ಯುದ್ಧ ವಿಮಾನಗಳ ಹಾರಾಟ...

ಮಧ್ಯಪ್ರದೇಶದ ಇಂದೋರ್‌ನಲ್ಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಧ್ವಜಾರೋಹಣ ಮಾಡಿದರು.

ಕರ್ನಾಟಕ, ಹರಿಯಾಣ, ಜಮ್ಮು ಮತ್ತು ಕಾಶ್ಮಿರ ಸ್ತಬ್ದಚಿತ್ರಗಳು

ಗಣರಾಜ್ಯೋತ್ಸವ: ಸ್ತಬ್ದಚಿತ್ರ ಮೆರವಣಿಗೆ...

ಗಣರಾಜ್ಯೋತ್ಸವ: ಪಥಸಂಚಲನ...

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ರಿಂದ ರಾಷ್ಟ್ರ ಧ್ವಜಾರೋಹಣ 

ರಾಜ್ಯದೆಲ್ಲೆಡೆ ಗಣರಾಜ್ಯೋತ್ಸವ ಆಚರಣೆ

ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ‌‌ ನೆರವೇರಿಸಿದರು

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ‌‌ ನೆರವೇರಿಸಿ, ಜಿಲ್ಲೆಯ ಜನರನ್ನು ಉದ್ದೇಶಿಸಿ ಮಾತನಾಡಿದರು

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ರಾಷ್ಟ್ರಗೀತೆಗೆ ಗೌರವ ವಂದನೆ ಸಲ್ಲಿಸಿದರು

ಧ್ವಜಾರೋಹಣ ನೆರವೇರಿಸಿದ ಸಚಿವ ಬಿ.ಸಿ.ಪಾಟೀಲ

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ರೈತರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ರೈತರಿಗೆ ಸಂತಸದ ದಿನಗಳು ಬರುತ್ತಿವೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ADVERTISEMENT

ಕೃಷಿ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ₹ 1 ಲಕ್ಷ ಕೋಟಿಯನ್ನು ಮೀಸಲು ಇಟ್ಟಿದೆ. ಆಹಾರ ಸಂಸ್ಕರಣೆಗೆ ಹತ್ತು ಸಾವಿರ ಕೋಟಿ ನೀಡಲಾಗಿದೆ. ಇದು ರೈತರ ಬದುಕನ್ನು ಹಸನ ಮಾಡಲಿದೆ ಎಂದು ಹೇಳಿದರು.

ಕೋವಿಡ್ ಕಾಲದಲ್ಲಿಯೂ ದೇಶದ ಆರ್ಥಿಕ ಸ್ಥಿತಿ ಹಾಳಾಗದಂತೆ ನೋಡಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ. ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ವಿದ್ಯಾನಿಧಿ ಮೂಲಕ ರೈತ ಮಕ್ಕಳ ವ್ಯಾಸಂಗಕ್ಕೆ ನೆರವು ನೀಡಲಾಗುತ್ತಿದೆ ಎಂದರು

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ರಿಂದ ರಾಷ್ಟ್ರ ಧ್ವಜಾರೋಹಣ 

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅವರು 73ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಕೋವಿಡ್, ಓಮೈಕ್ರಾನ್ ತಡೆಗಟ್ಟಲು ಎಲ್ಲರೂ ಲಸಿಕೆ ಪಡೆಯಬೇಕು‌. ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಪಡೆಯಬೇಕು. ಎಲ್ಲರೂ ಲಸಿಕೆ ಪಡೆದು ಕೋವಿಡ್ ನಿಯಮ ಪಾಲನೆ ಮಾಡಬೇಕು. ಅಂತರ ಕಾಪಾಡಿಕೊಳ್ಳಬೇಕು. ಜನ ಹೆಚ್ಚು ಸೇರಬಾರದು ಎಂದರು.

ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ನಂತರ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮೇಯರ್ ಜಿ.ಬಿ.ಕೃಷ್ಣಪ್ಪ ಇದ್ದರು. 

ಮಹಿಳಾ ಪೊಲೀಸ್ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕ ದಳ, ಮಹಿಳಾ ಪೊಲೀಸ್ ತಂಡ, ಮಾಜಿ ಸೈನಿಕರ ತಂಡ ಸೇರಿದಂತೆ ಒಟ್ಟು ಹತ್ತು ತುಕಡಿಗಳನ್ನು ತೆರೆದ ವಾಹನಗಳ ಮೂಲಕ ಪರಿವೀಕ್ಷಣೆ ನಡೆಸಿದರು. ನಂತರ ತುಕಡಿಗಳ ಗೌರವ ವಂದನೆ ಸ್ವೀಕರಿಸಿದರು.

ವಿಜಯಪುರದಲ್ಲಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ

ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ
ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ  ಧ್ವಜಾರೋಹಣ ನೆರವೇರಿಸಿದರು.

ಎಂಟಿಬಿ ನಾಗರಾಜ್ ಧ್ವಜಾರೋಹಣ

ಚಿಕ್ಕಬಳ್ಳಾಪುರ: ಇಲ್ಲಿನ‌ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. 

ನಂತರ ಮಾತನಾಡಿದ ಅವರು, ಚಿಕ್ಕಬಳ್ಳಾಪುರ  ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ, ಡಾ.ಸಿ.ಎನ್.ಆರ್.ರಾವ್ ಜನಿಸಿದ ಜಿಲ್ಲೆ. ಇದು ಹೆಮ್ಮೆಯ ಸಂಗತಿ ಎಂದು ಹೇಳಿದರು

ಕೊಪ್ಪಳದ ಜಿಲ್ಲಾಡಳಿತ ಭವನದ‌ ಆವರಣದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸಿಇಒ ಫೌಜೀಯಾ ತರುನ್ನುಮ್, ಹೆಚ್ಚುವರಿ ಡಿಸಿ ಮಾರುತಿ ಎಂ.ಪಿ.ಇತರರು ಇದ್ದರು

ಬೆಳಗಾವಿ: ಸಂಭ್ರಮದ ಗಣರಾಜ್ಯೋತ್ಸವ

ಬೆಳಗಾವಿ: ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಸರಳವಾಗಿ, ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ‌ನಿರಾಣಿ ಧ್ವಜಾರೋಹಣ

ಕಲಬುರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ‌ನಿರಾಣಿ ಮಾತನಾಡಿದರು. ಜಿಲ್ಲಾಧಿಕಾರಿ ಯಶವಂತ ಗುರುಕರ್ (ಬಲಬದಿ), ಪೊಲೀಸ್ ಕಮಿಷನರ್ ಡಾ.ರವಿಕುಮಾರ್, ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ ಇದ್ದರು

ಬೀದರ್‌: ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

ಬೀದರ್: ಜಿಲ್ಲಾಡಳಿತದಿಂದ ಇಲ್ಲಿಯ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ಧ್ವಜಾರೋಹಣ ನೆರವೇರಿಸಿದರು.

ಮೈಸೂರು: ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಬುಧವಾರ ಬೆಳಿಗ್ಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.

ಬಳಿಕ ನಡೆದ ಪೊಲೀಸ್ ಪಥಸಂಚಲನದಲ್ಲಿ ಎಂಟು ತುಕಡಿಗಳು ಪಾಲ್ಗೊಂಡವು. ಸಚಿವರು ಗೌರವ ವಂದನೆ ಸ್ವೀಕರಿಸಿದರು.

ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಮೇಯರ್ ಸುನಂದಾ ಫಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ‌.ಯೋಗೀಶ್, ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ, ಡಿಸಿಪಿಗಳಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ ಪಾಲ್ಗೊಂಡರು.

ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಪಾಲಿಕೆ ನೂತನ ಆಯುಕ್ತ ಡಾ. ಗೋಪಾಲಕೃಷ್ಣ ಧ್ವಜಾರೋಹಣ ನೆರವೇರಿಸಿದರು

ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಧ್ವಜಾರೋಹಣ ನೆರವೇರಿಸಿದರು.

ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು.

ರಾಮನಗರ: ಸಚಿವ ಅಶ್ವತ್ಥನಾರಾಯಣರಿಂದ ಧ್ವಜಾರೋಹಣ

ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಪೊಲೀಸ್, ಎನ್ ಸಿಸಿ ತಂಡಗಳಿಂದ ಪಥ ಸಂಚಲನ ನಡೆಯಿತು. ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ದೆಹಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾ ಅವರು ಧ್ವಜ ವಂದನೆ ಸ್ವೀಕರಿಸಿದರು

ಒಡಿಶಾದಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಪಟ್ನಾಯಕ್‌ ಅವರು 73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವರಿಸಿದರು.

ಮಹಾರಾಷ್ಟ್ರದ ನಾಗಪುರ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು...

ತಮಿಳುನಾಡು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸ್ಟಾಲಿನ್‌ ಅವರು 73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ದೆಹಲಿಯ ರಾಜಪಥದಲ್ಲಿ ಪೊಲೀಸರು ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಿರುವುದು...

73ನೇ ಗಣರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ದೇಶದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.

73ನೇ ಗಣರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.