ADVERTISEMENT

ಗಣರಾಜ್ಯೋತ್ಸವ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜನವರಿ 2025, 2:41 IST
Last Updated 26 ಜನವರಿ 2025, 2:41 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

'ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ನಮ್ಮ ಪ್ರಯಾಣ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರಿಗೆ ನಾವು ನಮಸ್ಕರಿಸುತ್ತೇವೆ' ಎಂದು ಹೇಳಿದ್ದಾರೆ.

'ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಬಲಿಷ್ಠ ಹಾಗೂ ಸಮೃದ್ಧ ದೇಶಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ' ಎಂದು ಅವರು ಶುಭಾಶಯ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.