
ಪ್ರಜಾವಾಣಿ ವಾರ್ತೆ
ಪದಕ
ನವದೆಹಲಿ: ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್, ಗೃಹರಕ್ಷಕ, ನಾಗರಿಕ ರಕ್ಷಣಾ ಪಡೆಯ 982 ಸಿಬ್ಬಂದಿಗೆ ಶೌರ್ಯ ಮತ್ತು ವಿವಿಧ ಸೇವಾ ಪದಕಗಳು ಘೋಷಣೆಯಾಗಿವೆ.
ಈ ಬಾರಿ 125 ಶೌರ್ಯ ಪದಕಗಳನ್ನು ನೀಡಲಾಗುತ್ತಿದ್ದು, ಅದರಲ್ಲಿ ಜಮ್ಮು–ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವವ ಸಿಬ್ಬಂದಿಗೆ 45 ಪದಕ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿರುವವರಿಗೆ 35 ಪದಕ ಮತ್ತು ಈಶಾನ್ಯ ರಾಜ್ಯಗಳಲ್ಲಿನ ಸಿಬ್ಬಂದಿಗೆ 5 ಪದಕ ಲಭಿಸಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
101 ಜನರಿಗೆ ರಾಷ್ಟ್ರಪತಿ ಸೇವಾ ಪದಕ ಮತ್ತು 756 ಜನರಿಗೆ ವಿಶಿಷ್ಟ ಸೇವಾ ಪದಕ ಘೋಷಣೆಯಾಗಿದೆ.
ಪೊಲೀಸ್ ಮತ್ತು ಭದ್ರತಾ ಪಡೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪದಕಗಳನ್ನು ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.