ADVERTISEMENT

ಎಫ್‌ಐಆರ್‌ ಪ್ರಶ್ನಿಸಿ ’ಸುಪ್ರೀಂ’ ಮೆಟ್ಟಿಲೇರಿದ ತರೂರ್‌, ರಾಜ್‌ದೀಪ್ ಸರ್‌ದೇಸಾಯಿ

ಪಿಟಿಐ
Published 3 ಫೆಬ್ರುವರಿ 2021, 7:18 IST
Last Updated 3 ಫೆಬ್ರುವರಿ 2021, 7:18 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌    

ನವದೆಹಲಿ: ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜನರ ದಾರಿ ತಪ್ಪಿಸುವಂಥ ಟ್ವೀಟ್‌ ಮಾಡಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಹಿರಿಯ ಪತ್ರಕರ್ತ ರಾಜದೀಪ್‌ ಸರ್‌ದೇಸಾಯಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪತ್ರಕರ್ತರಾದ ಮೃಣಾಲ್‌ ಪಾಂಡೆ, ಜಫರ್‌ ಆಘಾ, ಪರೇಶ್‌ ನಾಥ್‌ ಹಾಗೂ ಅನಂತನಾಥ್‌ ಅವರು ಸಹ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸರು ಸಂಸದ ತರೂರ್‌, ಪತ್ರಕರ್ತ ರಾಜ್‌ದೀಪ್‌, ಕ್ಯಾರವಾನ್‌ ಪೋರ್ಟಲ್‌ ಹಾಗೂ ಇತರರ ವಿರುದ್ಧ ಜ. 30ರಂದು ಎಫ್‌ಐಆರ್‌ ದಾಖಲಿಸಿದ್ದಾರೆ.

ತರೂರ್‌ ಹಾಗೂ ಆರು ಜನ ಪತ್ರಕರ್ತರ ವಿರುದ್ಧ ನೋಯ್ಡಾ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇವರೆಲ್ಲರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಸಹ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.