ADVERTISEMENT

ಅರ್ನಬ್‌ ಬಂಧನ: ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಹಾರಾಷ್ಟ್ರ ಗೃಹ ಸಚಿವ

ಏಜೆನ್ಸೀಸ್
Published 4 ನವೆಂಬರ್ 2020, 7:48 IST
Last Updated 4 ನವೆಂಬರ್ 2020, 7:48 IST
ಮಹಾರಾಷ್ಟ್ರ ಗೃಹ ಸಚಿವ ಅರ್ನಬ್‌ ಗೋಸ್ವಾಮಿ
ಮಹಾರಾಷ್ಟ್ರ ಗೃಹ ಸಚಿವ ಅರ್ನಬ್‌ ಗೋಸ್ವಾಮಿ    

ಮುಂಬೈ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್ ಸರ್ಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು, 'ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಮಹಾರಾಷ್ಟ್ರ ಪೊಲೀಸರು ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದಾರೆ' ಎಂದು ತಿಳಿಸಿದ್ದಾರೆ.

ಇದೇ ವೇಳೆ, ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅರ್ನಬ್‌ ಗೋಸ್ವಾಮಿ ಆರೋಪಿಸಿದ್ದಾರೆ.

ADVERTISEMENT

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.