ADVERTISEMENT

ಅಲಿಬಾಗ್‌ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ನಬ್‌ ಗೋಸ್ವಾಮಿಯಿಂದ ಜಾಮೀನು ಅರ್ಜಿ

ಏಜೆನ್ಸೀಸ್
Published 9 ನವೆಂಬರ್ 2020, 10:07 IST
Last Updated 9 ನವೆಂಬರ್ 2020, 10:07 IST
ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ
ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ   

ಮುಂಬೈ: ಮಹಾರಾಷ್ಟ್ರ ಪೊಲೀಸರಿಂದ ಕಳೆದ ವಾರ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರು ಅಲಿಬಾಗ್ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಕಳೆದ ವಾರ ವಶಕ್ಕೆ ಪಡೆದುಕೊಂಡಿತ್ತು.

ಬಂಧನದಲ್ಲಿರುವ ತಮಗೆ ವಕೀಲರನ್ನೂ ಸಹ ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಗೋಸ್ವಾಮಿ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.