ADVERTISEMENT

ಮಹಾರಾಷ್ಟ್ರ ಗಡಿ ಗ್ರಾಮದ ಯುವಕರಿಗೆ ಮೀಸಲಾತಿ

ಪಿಟಿಐ
Published 2 ಮಾರ್ಚ್ 2019, 18:43 IST
Last Updated 2 ಮಾರ್ಚ್ 2019, 18:43 IST

ಮುಂಬೈ: ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಶನಿವಾರ ಉನ್ನತಮಟ್ಟದ ಸಮಿತಿ ಸಭೆ ನಡೆಸಿದರು.

ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಸಭೆ ನಿರ್ಧರಿಸಿತು.

ಗಡಿ ವಿವಾದ ಕುರಿತಾದ ವಿವಿಧ ಕಾನೂನು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎರಡು ವರ್ಷಗಳ ಬಳಿಕ ಮೊದಲ ಬಾರಿ ಗಡಿ ವಿವಾದ ಕುರಿತು ಸಭೆ ನಡೆಸಲಾಗಿದೆ.

ADVERTISEMENT

ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರ ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್‌ ಸಾಳ್ವೆ ಅವರಿಗೆ ನೆರವಾಗಲು ಇನ್ನೊಬ್ಬ ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಫಡಣವೀಸ್‌ ತಿಳಿಸಿದ್ದಾರೆ.

ಹೊಸ ವಕೀಲರ ನೇಮಕದ ಬಳಿಕ ದೆಹಲಿಯಲ್ಲಿ ಸಭೆ ನಡೆಸಿ ಮುಂದಿನ ಕಾನೂನು ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

‘ಹಲವು ವಿಷಯಗಳ ಕುರಿತು ಸಕಾರಾತ್ಮಕವಾದ ಚರ್ಚೆ ನಡೆದಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ನೀಡುವ ಶೇಕಡ 16ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೂ ಕಲ್ಪಿಸಬೇಕು ಎಂದು ಕೋರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.