ADVERTISEMENT

‘ಮೀಸಲಾತಿ: ಬಹಿರಂಗ ಮಾತಿಲ್ಲ’

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 22:06 IST
Last Updated 19 ಫೆಬ್ರುವರಿ 2021, 22:06 IST
ಡಾ.ಅಶ್ವತ್ಥ ನಾರಾಯಣ
ಡಾ.ಅಶ್ವತ್ಥ ನಾರಾಯಣ   

ಮಂಡ್ಯ: ‘ಮೀಸಲಾತಿ ಹೋರಾಟದ ವಿಚಾರವಾಗಿ ಯಾರೂ ಬಹಿರಂಗವಾಗಿ ಮಾತನಾಡಬಾರದು ಎಂದು ತೀರ್ಮಾನ ಕೈಗೊಳ್ಳಲಾಗಿದೆ’ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ನಡೆಸಲು ಎಲ್ಲರಿಗೂ ಹಕ್ಕಿದೆ. ವೈಜ್ಞಾನಿಕ ರೀತಿಯಲ್ಲಿ ಮೀಸಲಾತಿ ನಿಗದಿಯಾಗಬೇಕು. ಈ ವಿಚಾರದಲ್ಲಿ ಹೆಚ್ಚು ಮಾತನಾಡುವುದು ಸೂಕ್ತವಲ್ಲ. ಹೋರಾಟದ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂಬುದು ಸುಳ್ಳು ಆರೋಪ’ ಎಂದರು.

‘ಕಾಂಗ್ರೆಸ್‌, ಜೆಡಿಎಸ್‌ನಿಂದ ಬಿಜೆಪಿಗೆ ಶಾಸಕರು ಬರುತ್ತಾರೆ ಎಂಬ ವಿಚಾರ ನಾನು ಹೇಳುವಂಥದ್ದಲ್ಲ. ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿ, ನಮ್ಮ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.