ADVERTISEMENT

‘ವಿಭಾಗವಾರು ಮೀಸಲಾತಿ ಕಲ್ಪಿಸಿ’

ಪಿಟಿಐ
Published 27 ಫೆಬ್ರುವರಿ 2019, 20:23 IST
Last Updated 27 ಫೆಬ್ರುವರಿ 2019, 20:23 IST
   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ವಿಭಾಗವಾರು ಮೀಸಲಾತಿ ಪರಿಗಣಿಸಬೇಕೇ ಹೊರತು ವಿಶ್ವವಿದ್ಯಾಲಯ ಅಥವಾ ಕಾಲೇಜುಗಳನ್ನು ಘಟಕಗಳನ್ನಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪ‍ಡಿಸಿದೆ.

ಕಾಲೇಜು ಅಥವಾ ವಿಶ್ವವಿದ್ಯಾಲಯವಾರು ಬದಲು ವಿಭಾಗವಾರು ಮೀಸಲಾತಿ ಕಲ್ಪಿಸಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್‌ ಜನವರಿ 21ರಂದು ತಿರಸ್ಕರಿಸಿತ್ತು.

ಈ ತೀರ್ಪುನ್ನು ಪುನರ್ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರ ಮತ್ತು ಯುಜಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪು ಸರಿಯಾಗಿದೆ ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.