ಕೋಲ್ಕತ್ತ: ಪಶ್ಚಿಮ ಬಂಗಾಳದ ಶಾಸಕ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಅಂಗೀಕರಿಸಿದ್ದಾರೆ ಎಂದು ಬಿಜೆಪಿಗೆ ಸೇರ್ಪಡೆಯಾದ ಸುವೇಂದು ಅಧಿಕಾರಿ ಅವರು ತಿಳಿಸಿದರು.
‘ಸೋಮವಾರ ನಾನು ಸ್ಪೀಕರ್ ಅವರನ್ನು ಭೇಟಿಯಾದೆ. ಈ ವೇಳೆ ಅವರು ನನ್ನ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ’ ಎಂಬುದಾಗಿ ತಿಳಿಸಿದರು ಎಂದು ಸುವೇಂದು ಅಧಿಕಾರಿ ಅವರು ಮಾಹಿತಿ ನೀಡಿದರು.
ಟಿಎಂಸಿಯ ಸುವೇಂದು ಅಧಿಕಾರಿ ಅವರು ಕಳೆದ ವಾರ ತಮ್ಮ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ, ಈಚೆಗೆ ಬಿಜೆಪಿಗೆ ಸೇರ್ಪಡೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.