ADVERTISEMENT

ಶಾಲೆಗಳಲ್ಲಿ ಮಧ್ಯಾಹ್ನದ ಊಟ ಪುನರಾರಂಭಿಸಲು ಸೋನಿಯಾ ಗಾಂಧಿ ಒತ್ತಾಯ

ಪಿಟಿಐ
Published 23 ಮಾರ್ಚ್ 2022, 10:23 IST
Last Updated 23 ಮಾರ್ಚ್ 2022, 10:23 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ದೀರ್ಘ ಸಮಯದಿಂದ ಮುಚ್ಚುಗಡೆಗೊಂಡಿದ್ದ ಶಾಲೆಗಳು ತೆರೆದಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದ ಊಟವನ್ನು ಪುನರಾರಂಭಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಸೋನಿಯಾ ಗಾಂಧಿ, ಮಕ್ಕಳಿಗೆ ಪೌಷ್ಟಿಕಾಂಶ ಪೂರೈಕೆಯ ಮಹತ್ವವನ್ನು ಪ್ರತಿಪಾದಿಸಿದರು.

ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳಿಗೆ ಅತಿ ಹೆಚ್ಚಿನ ತೊಂದರೆ ಎದುರಾಗಿದೆ ಎಂದು ಸೋನಿಯಾ ಗಾಂಧಿ ತಿಳಿಸಿದರು.

ಕೋವಿಡ್‌ನಿಂದಾಗಿ ಜೀವನೋಪಾಯಕ್ಕೆ ಮಕ್ಕಳ ಹೆತ್ತವರು ಸಮಸ್ಯೆ ಎದುರಿಸುವಂತಾಯಿತು. ಈಗ ಮಕ್ಕಳು ಶಾಲೆಗೆ ತೆರಳುವಾಗ ಪೌಷ್ಟಿಕಾಂಶ ಪೂರೈಕೆಯ ಅಗತ್ಯವಿದೆ ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ಮುಚ್ಚಿದಾಗ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.