ADVERTISEMENT

ರೈಲ್ವೆ ರಿಯಾಯಿತಿ ಸೌಲಭ್ಯ ಮರುಸ್ಥಾಪನೆ ಸದ್ಯ ಸಾಧ್ಯವಿಲ್ಲ: ರೈಲ್ವೆ ಸಚಿವ

ಪಿಟಿಐ
Published 3 ಡಿಸೆಂಬರ್ 2021, 14:26 IST
Last Updated 3 ಡಿಸೆಂಬರ್ 2021, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ಪಿಡುಗಿನಿಂದ ಅಮಾನತುಗೊಳಿಸಿರುವ ರೈಲ್ವೆ ಟಿಕೆಟ್‌ಗಳ ಮೇಲಿನ ರಿಯಾಯಿತಿಗಳನ್ನು ಮರುಸ್ಥಾಪಿಸುವುದು ಪ್ರಸ್ತುತ ಕಾರ್ಯಸಾಧುವಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಟಿಕೆಟ್‌ಗಳ ಮೇಲಿನ ರಿಯಾಯಿತಿ ಸೌಲಭ್ಯಗಳನ್ನು ಮರು ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಹಲವು ಮನವಿಗಳ ಬಂದಿವೆ ಎಂದು ಅವರು ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.

ಕೋವಿಡ್‌ ಮಾರ್ಗಸೂಚಿ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಪ್ರಯಾಣಿಕರಿಗೆ (ಅಂಗವಿಕಲರು, 11 ವರ್ಗದ ರೋಗಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ) 2020ರ ಮಾರ್ಚ್‌ 20ರಿಂದ ರಿಯಾಯಿತಿ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಕೋವಿಡ್‌ ಪೂರ್ವ ಕಾಲದಲ್ಲಿ ರೈಲ್ವೆಯು 54 ವಿಭಾಗಗಳಲ್ಲಿ ಪ್ರಯಾಣಿಕರಿಗೆ ರಿಯಾಯಿತಿ ಸೌಲಭ್ಯಗಳನ್ನು ಒದಗಿಸುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.