ADVERTISEMENT

‘ಸುಪ್ರೀಂ’ನಿಂದ ವಿವಿಧ ನಿರ್ಬಂಧ

ತುರ್ತು ಪ್ರಕರಣಗಳಷ್ಟೇ ವಿಚಾರಣೆ, ವಕೀಲರ ಕಚೇರಿ ಮುಚ್ಚಲು ಆದೇಶ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 20:37 IST
Last Updated 23 ಮಾರ್ಚ್ 2020, 20:37 IST

ನವದೆಹಲಿ (ಪಿಟಿಐ): ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿರುವ ವಕೀಲರ ಕಚೇರಿಗಳನ್ನು ಮುಚ್ಚಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಒಂದು ಪೀಠವಷ್ಟೇ ಕಾರ್ಯ ನಿರ್ವಹಿಸಲಿದ್ದು, ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿದೆ ಎಂದು ತಿಳಿಸಿದೆ.

ನ್ಯಾಯಾಲಯ ಸಂಕೀರ್ಣ ಪ್ರವೇಶಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ವಕೀಲರು ಮತ್ತು ಸಿಬ್ಬಂದಿಗೆ ನೀಡಿದ್ದ ಪ್ರವೇಶದ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ.

‘ನಾವು ವಕೀಲರ ದಟ್ಟಣೆ ನೋಡಲು ಬಯಸುವುದಿಲ್ಲ. ವಕೀಲರು ಮೇಲ್ಮನವಿ ಸಲ್ಲಿಸಲು ಅಗತ್ಯ ಕಾಲಮಿತಿಯನ್ನು ಕಾಯ್ದೆ ಪ್ರಕಾರ ವಿಧಿಸಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠವು ಸೋಮವಾರ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.