ADVERTISEMENT

ಕೋವಿಡ್‌: ಮಹಾರಾಷ್ಟ್ರದಲ್ಲಿ ನಿರ್ಬಂಧ ಸಡಿಲಿಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 20:05 IST
Last Updated 2 ಮಾರ್ಚ್ 2022, 20:05 IST
   

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸುತ್ತಿದ್ದು, ಸರ್ಕಾರವು ಶಾಪಿಂಗ್ ಕಾಂಪ್ಲೆಕ್ಸ್‌, ರೆಸ್ಟೋರೆಂಟ್‌ ಮತ್ತು ಬಾರ್‌, ಕ್ರೀಡಾ ಸಂಕೀರ್ಣ, ಜಿಮ್‌, ಸ್ಪಾ, ಸಿನಿಮಾ ಹಾಲ್‌, ಪ್ರವಾಸಿ ಸ್ಥಳಗಳು ಮತ್ತು ಮನರಂಜನಾ ಉದ್ಯಾನವನಗಳ ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಿ, ದೊಡ್ಡ ನಗರಗಳಲ್ಲಿ ಶೇ 100 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಈ ಕುರಿತು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೊಸ ಮಾರ್ಗಸೂಚಿಗಳು ಮಾರ್ಚ್ 4 ರಿಂದ ಜಾರಿಗೆ ಬರಲಿವೆ, ಆದಾಗ್ಯೂ, ಕೋವಿಡ್ -19 ಮಾನದಂಡಗಳನ್ನು ನಿರ್ವಹಿಸುವುದು ಅಗತ್ಯ ಎಂದು ಹೇಳಿದೆ.

ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಕೈಗಾರಿಕೆ ಮತ್ತು ವೈಜ್ಞಾನಿಕ ಸಂಸ್ಥೆಗಳು ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು. ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳು ಪುನರಾರಂಭ ಮಾಡಲು ಅನುಮತಿ ನೀಡಲಾಗಿದೆ. ಆದರೆ, ಮಾಸ್ಕ್‌ ಬಳಸುವುದು ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ADVERTISEMENT

ಕೋವಿಡ್‌ ಲಸಿಕೆಯ ಎರಡು ಡೋಸ್‌ ಪಡೆಯದವರಿಗೆ ಅಂತರ್‌ ರಾಜ್ಯ ಸಂಚಾರಕ್ಕೆ ನಿರ್ಬಂಧವಿಲ್ಲ. ಆದರೆ, ಸಂಚಾರದ ಸಂದರ್ಭದಲ್ಲಿ 72 ಗಂಟೆಗಳ ಅವಧಿಯಲ್ಲಿ ಪಡೆದಿರುವ ಆರ್‌ಟಿ–ಪಿಸಿಆರ್‌ ವರದಿಯನ್ನು ಹೊಂದಿರಬೇಕು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.