ನವದೆಹಲಿ: ಭ್ರಷ್ಟಚಾರ ಪ್ರಕರಣದಡಿ ಸಿಬಿಐನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ಎಂ.ಪಿ ಸಿನ್ಹಾ ಅವರನ್ನುಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.
ಈ ವರ್ಷದ ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದ ಸಿನ್ಹಾ, ಸಿಬಿಐನ ಆರ್ಥಿಕ ಅಪರಾಧ ವಿಭಾಗದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರು ಬಿಹಾರಮೇವಿನ ಹಗರಣದ ತನಿಖಾ ತಂಡದ ಭಾಗವಾಗಿದ್ದರು. ಆದರೆ ಇದೀಗ ಸಿನ್ಹಾ ಅವರ ವಿರುದ್ಧ ₹25 ಲಕ್ಷ ಲಂಚ ಸ್ವೀಕರಿಸಿದ ಆರೋಪವಿದೆ ಎಂದು ಅಧಿಕಾರಿಗಳು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.