
ಬಂಧನ
ತೇಜಪುರ: ಪಾಕಿಸ್ತಾನದ ಗುಪ್ತಚರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯನ್ನು ಅಸ್ಸಾಂನ ಸೋನಿತ್‌ಪುರದಲ್ಲಿ ಬಂಧಿಸಲಾಗಿದೆ.
ಆರೋಪಿಯು ದೇಶದ ಸೂಕ್ಷ್ಮ ದಾಖಲೆಗಳು ಮತ್ತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದ ಮೂಲಕ ಪಾಕಿಸ್ತಾನದ ಗುಪ್ತಚರರ ಜೊತೆ ಹಂಚಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರಿಚರಣ್ ಭೂಮಿಜ್ ತಿಳಿಸಿದ್ದಾರೆ.
ಆರೋಪಿಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಕೆಲ ಮಾಹಿತಿಯನ್ನು ಅಳಿಸಲಾಗಿದ್ದು, ಪೊಲೀಸರು ಅವುಗಳನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.
ಭಾರತೀಯ ನಯಾ ಸಂಹಿತೆಯ ಅಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯ ಅವರನ್ನು ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.