ADVERTISEMENT

ರಾಜ್ಯದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಎಎಪಿಗೆ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಏಪ್ರಿಲ್ 2022, 7:59 IST
Last Updated 4 ಏಪ್ರಿಲ್ 2022, 7:59 IST
ರಾಜ್ಯದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಎಎಪಿಗೆ ಸೇರ್ಪಡೆ. ಚಿತ್ರ: ಟ್ವಿಟರ್/@AamAadmiParty
ರಾಜ್ಯದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಎಎಪಿಗೆ ಸೇರ್ಪಡೆ. ಚಿತ್ರ: ಟ್ವಿಟರ್/@AamAadmiParty   

ನವದೆಹಲಿ: ನಿವೃತ್ತ ಐಪಿಎಸ್‌ ಅಧಿಕಾರಿ ಬಿ. ಭಾಸ್ಕರ್‌ ರಾವ್‌ ಸೋಮವಾರ ಆಮ್‌ ಆದ್ಮಿ ಪಕ್ಷ (ಎಎಪಿ) ಸೇರಿದರು. ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.

1990ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು, ಇತ್ತೀಚೆಗಷ್ಟೇ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.

ಭಾಸ್ಕರ್‌ ರಾವ್‌ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಅವರು ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ ದಿನದಿಂದಲೂ ಪ್ರಚಾರದಲ್ಲಿತ್ತು. ಎಎಪಿ, ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳ ಸೇರ್ಪಡೆ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿತ್ತು. ಅದರಂತೆ ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಅಧಿಕೃತವಾಗಿ ಆಪ್‌‌ಗೆ ಸೇರ್ಪಡೆಗೊಂಡಿದ್ದಾರೆ.

ADVERTISEMENT

ಬೆಂಗಳೂರು ನಗರ ಪೊಲೀಸ್ ಕಮಿಷನರ್, ಸಾರಿಗೆ ಇಲಾಖೆ ಆಯುಕ್ತರು, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.