ADVERTISEMENT

ದರೋಡೆಕೋರರಿಂದ ನಿವೃತ್ತ ಅಧಿಕಾರಿ ಪತ್ನಿಯ ಕೊಲೆ

ಪಿಟಿಐ
Published 21 ಜೂನ್ 2020, 11:06 IST
Last Updated 21 ಜೂನ್ 2020, 11:06 IST

ನವದೆಹಲಿ: ವಿದೇಶಾಂಗ ಸಚಿವಾಲಯದ ನಿವೃತ್ತ ಅಧಿಕಾರಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರು, ಅವರ ಮೇಲೆ ಹಲ್ಲೆ ನಡೆಸಿ, ಅವರ ಪತ್ನಿಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಫ್ದರ್‌ಜಂಗ್‌ ಪ್ರದೇಶದಲ್ಲಿರುವನಿವೃತ್ತ ಅಧಿಕಾರಿ ಬಿ.ಆರ್‌.ಚಾವ್ಲಾ (94) ಅವರ ಮನೆಯಿರುವ ಕಟ್ಟಡಕ್ಕೆ ಇತ್ತೀಚೆಗೆ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ, ತನ್ನ 2–3 ಸಹಚರರೊಂದಿಗೆ ಮನೆಯೊಳಗೆ ನುಗ್ಗಿ ದರೋಡೆ ಮಾಡಿದ್ದಾನೆ. ದರೋಡೆಗೆ ಪ್ರತಿರೋಧ ವ್ಯಕ್ತಪಡಿಸಿದ ಚಾವ್ಲಾ ಅವರ ಮೇಲೆ ಗುಂಪು ಹಲ್ಲೆ ನಡೆಸಿದೆ. ಅವರ ಪತ್ನಿ ಕಾಂತಾ (88) ಅವರನ್ನು ಹರಿತವಾದ ಆಯುಧದಿಂದ ಇರಿದು ಈ ಗುಂಪು ಕೊಲೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾಂತಾ ಅವರನ್ನು ಸಮೀಪದ ಆಸ್ಪತ್ರೆಗೆ ದಕರೆದೊಯ್ಯಲಾಯಿತು. ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮಲಗುವ ಕೋಣೆಯೊಳಗಿನ ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ತಂಡ ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.