ADVERTISEMENT

ಕೋವಿಡ್: ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚುತ್ತಿದೆ ಎಂದ ಪ್ರಧಾನಿ ಮೋದಿ

ಏಜೆನ್ಸೀಸ್
Published 27 ಜೂನ್ 2020, 6:44 IST
Last Updated 27 ಜೂನ್ 2020, 6:44 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರೆವೆರೆಂಡ್ ಡಾ. ಜೋಸೆಫ್ ಮರ್‌ಥೊಮಾ ಅವರ 90ನೇ ಜನ್ಮದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಕೊರೊನಾ ವಿರುದ್ಧದ ಹೋರಾಟದಲ್ಲಿ ಇತರ ಅನೇಕ ದೇಶಗಳಿಗಿಂತ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದು ಹೇಳಿದರು.

‘ಕೊರೊನಾ ಪರಿಣಾಮ ಭಾರತದಲ್ಲಿ ಗಂಭೀರವಾಗಿರಬಹುದು ಎಂದು ಈ ವರ್ಷದ ಆರಂಭದಲ್ಲಿ ಅನೇಕರು ಭಾವಿಸಿದ್ದರು. ಆದರೆ ಲಾಕ್‌ಡೌನ್, ಸರ್ಕಾರ ಕೈಗೊಂಡ ಅನೇಕ ಕ್ರಮಗಳು, ಜನರ ಸಹಕಾರದಿಂದಾಗಿ ದೇಶವಿಂದು ಉತ್ತಮ ಸ್ಥಿತಿಯಲ್ಲಿದೆ’ ಎಂದು ಅವರು ಹೇಳಿದರು.

ADVERTISEMENT

ದೇಶದಲ್ಲಿ 8 ಕೋಟಿ ಕುಟುಂಬಗಳಿಗೆ ಉಚಿತ ಅಡುಗೆ ಅನಿಲದ ಸಂಪರ್ಕ ಕಲ್ಪಿಸಲಾಗಿದೆ. ಮನೆ ಇಲ್ಲದವರಿಗಾಗಿ 1.5 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ವಿಶ್ವದ ಅತಿ ದೊಡ್ಡ ಆರೋಗ್ಯ ಯೋಜನೆ ‘ಆಯುಷ್ಮಾನ್ ಭಾರತ್’ ಮೂಲಕ ಜನರಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.