ADVERTISEMENT

ಕೋವಿಡ್‌ ಲಸಿಕೆ: ತುರ್ತು ಬಳಕೆಗೆ ಡಿಸಿಜಿಐನಿಂದ ಶೀಘ್ರ ನಿರ್ಧಾರ ಸಾಧ್ಯತೆ?

ಏಜೆನ್ಸೀಸ್
Published 8 ಡಿಸೆಂಬರ್ 2020, 4:28 IST
Last Updated 8 ಡಿಸೆಂಬರ್ 2020, 4:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮೂರು ಕೋವಿಡ್‌ ಲಸಿಕೆಗಳನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡುವ ಸಂಬಂಧ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಇಲಾಖೆ ಬುಧವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಭಾರತ್‌ ಬಯೋಟೆಕ್‌, ಫೈಜರ್‌ ಹಾಗೂ ಭಾರತದ ಸೆರಂ ಇನ್‌ಸ್ಟಿಟ್ಯೂಟ್‌ ತಾವು ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ಕೋರಿ ಡಿಜಿಸಿಐಗೆ ಅರ್ಜಿ ಸಲ್ಲಿಸಿವೆ.

ಭಾರತ್‌ ಬಯೋಟೆಕ್‌ ಸಂಸ್ಥೆಯು ತಾನು ಅಭಿವೃದ್ಧಿಪಡಿಸಿರುವ ಕೋವಿಡ್‌–19 ಲಸಿಕೆ ಕೊವ್ಯಾಕ್ಸಿನ್ ಅನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡುವಂತೆ ಭಾರತೀಯ ಪ್ರಧಾನಔಷಧ ನಿಯಂತ್ರಕ (ಡಿಸಿಜಿಐ) ಇಲಾಖೆಗೆ ಸೋಮವಾರ ಅರ್ಜಿ ಸಲ್ಲಿಸಿದೆ.

ADVERTISEMENT

ಈ ಮೂರು ಕಂಪನಿಯ ಅರ್ಜಿಗಳನ್ನು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್‌ಸಿಒ) ವಿಷಯ ತಜ್ಞರ ಸಮಿತಿಯು (ಎಸ್‌ಇಸಿ) ಮಂಗಳವಾರ ಅಥವಾ ಬುಧವಾರ ಸಭೆ ಸೇರಿ ವ್ಯಾಕ್ಸಿನ್‌ ಬಳಕೆ ಸಂಬಂಧ ಪರಿಶೀಲನೆ ನಡೆಸಲಿದೆ ಎನ್ನಲಾಗಿದೆ. ಬಳಿಕ ಡಿಸಿಜಿಐಗೆ ವರದಿ ನೀಡಲಿದ್ದು ಅಂತಿಮವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.

ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್‌) ಸಹಯೋಗದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಅಮೆರಿಕದ ಫೈಜರ್‌ ಹಾಗೂ ಭಾರತದ ಸೆರಂ ಇನ್‌ಸ್ಟಿಟ್ಯೂಟ್‌ ಅಭಿವೃದ್ಧಿಪಡಿಸಿರುವ ಎರಡು ಲಸಿಕೆಗಳೂ ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.