ADVERTISEMENT

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಇಂದು ಶಿಕ್ಷೆ ತೀರ್ಪು ಪ್ರಕಟ

ಪಿಟಿಐ
Published 19 ಜನವರಿ 2025, 23:30 IST
Last Updated 19 ಜನವರಿ 2025, 23:30 IST
<div class="paragraphs"><p>ಕೋರ್ಟ್</p></div>

ಕೋರ್ಟ್

   

(ಸಾಂದರ್ಭಿಕ ಚಿತ್ರ)

ಕೋಲ್ಕತ್ತ: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಕೊಂದಿದ್ದು ಸಂಜಯ್‌ ರಾಯ್‌ ಎಂದು ಹೇಳಿರುವ ನ್ಯಾಯಾಲಯವು ಸೋಮವಾರ ಶಿಕ್ಷೆಯ ಪ್ರಮಾಣ ತೀರ್ಪು ಪ್ರಕಟಿಸಲಿದೆ.

ADVERTISEMENT

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್‌ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ರಾಯ್ ಅಪರಾಧಿ ಎಂದು ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಶನಿವಾರ ಆದೇಶ ಪ್ರಕಟಿಸಿದ್ದರು.

ಸೆಕ್ಷನ್ 103(1)ರ ಅಡಿಯಲ್ಲಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.