ಕೋಲ್ಕತ್ತದಲ್ಲಿ ಪ್ರತಿಭಟನೆ
–ಪಿಟಿಐ ಚಿತ್ರ
ಕೋಲ್ಕತ್ತ: ನಗರದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಪೋಷಕರು ಸೇರಿದಂತೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದಾರೆ.
‘ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಮಹಿಳಾ ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ‘ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.
‘ಪೊಲೀಸರು ನಡೆಸಿದ ಹಲ್ಲೆಯಿಂದಾಗಿ ನನ್ನ ಕೈಯಲ್ಲಿದ್ದ ಬಳೆಗಳು ಒಡೆದು ಹೋಗಿವೆ. ಜತೆಗೆ, ತಲೆಗೂ ಗಾಯವಾಗಿದೆ’ ಎಂದೂ ಅವರು ದೂರಿದ್ದಾರೆ.
‘ನ್ಯಾಯಾಲಯದ ಶಾಂತಿಯುತ ರ‍್ಯಾಲಿ ನಡೆಸಲು ಅನುಮತಿ ನೀಡಿದ್ದರೂ ಕೂಡಾ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ಡೊರಿನಾ ಕ್ರಾಸಿಂಗ್ ತಲುಪದಂತೆ ಪೊಲೀಸರು ನಮ್ಮನ್ನು ತಡೆದರು’ ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ.
ಪ್ರತಿಭಟನಾಕಾರರು ವಿದ್ಯಾಸಾಗರ್ ಸೇತು ಕಡೆಗೆ ತೆರಳುವ ವೇಳೆ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಸಂತ್ರಸ್ತೆಯ ಪೋಷಕರು, ಬಿಜೆಪಿ ನಾಯಕರು ಸೇರಿದಂತೆ 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
2024ರ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.