ADVERTISEMENT

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಅರ್ಜಿ ಸಲ್ಲಿಸಲು ಪೋಷಕರಿಗೆ ಅನುಮತಿ

ಪಿಟಿಐ
Published 17 ಮಾರ್ಚ್ 2025, 14:30 IST
Last Updated 17 ಮಾರ್ಚ್ 2025, 14:30 IST
<div class="paragraphs"><p>ಕೋಲ್ಕತ್ತದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹೊರಗೆ&nbsp;ಪೊಲೀಸರು</p></div>

ಕೋಲ್ಕತ್ತದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹೊರಗೆ ಪೊಲೀಸರು

   

(ರಾಯಿಟರ್ಸ್ ಚಿತ್ರ)

ನವದೆಹಲಿ: ಕೋಲ್ಕತ್ತದ ಆರ್‌.ಜಿ ಕರ್‌ ಆಸ್ಪತ್ರೆ ಪ್ರಕರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐನಿಂದ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಕಲ್ಕತ್ತ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಸಂತ್ರಸ್ತೆಯ ಪೋಷಕರಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ADVERTISEMENT

ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೆಲವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲೆ ಕರುಣಾ ನಂದಿ ಮುಂದಿಟ್ಟ ವಾದವನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಒಪ್ಪಿಕೊಂಡಿತು.

‘ವಿಚಾರಣೆಯನ್ನು ಮುಂದುವರಿಸುವಂತೆ ಹೈಕೋರ್ಟ್‌ ಮೊರೆ ಹೋಗುವ ಸ್ವಾತಂತ್ರ್ಯವನ್ನು ಅರ್ಜಿದಾರರು ಹೊಂದಿದ್ದಾರೆ ಎಂದು ಹೇಳಿ ಈ ಅರ್ಜಿಯನ್ನು (ಪೋಷಕರ) ನಾವು ವಿಲೇವಾರಿ ಮಾಡುತ್ತೇವೆ’ ಎಂದು ಪೀಠ ಹೇಳಿತು. ಸಂತ್ರಸ್ತೆಯ ಪೋಷಕರು ಈ ವೇಳೆ ನ್ಯಾಯಾಲಯದ ಕೊಠಡಿಯಲ್ಲಿ ಹಾಜರಿದ್ದರು.

ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಪರಾಧಿ ಸಂಜಯ್‌ ರಾಯ್‌ಗೆ ಸಿಯಾಲದಹ ವಿಚಾರಣಾ ನ್ಯಾಯಾಲಯ ಜೀವಿತಾವಧಿವರೆಗೆ ಜೈಲು ಶಿಕ್ಷೆ ವಿಧಿಸಿ ಜ.20ರಂದು ತೀರ್ಪು ನೀಡಿದೆ. 

ಆದರೆ, ಸಿಬಿಐ ತನಿಖೆಗೆ ಅತೃಪ್ತಿ ವ್ಯಕ್ತಪಡಿಸಿದ್ದ ಸಂತ್ರಸ್ತೆಯ ಪೋಷಕರು ಪ್ರಕರಣದ ಹೆಚ್ಚಿನ ತನಿಖೆಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.