ADVERTISEMENT

ಲಸಿಕೆ ಪ‍ಡೆಯಲು ಆನ್‌ಲೈನ್‌ ನೋಂದಣಿ ಕಡ್ಡಾಯ ಬೇಡ: ರಾಹುಲ್ ಗಾಂಧಿ ಆಗ್ರಹ

ಪಿಟಿಐ
Published 10 ಜೂನ್ 2021, 9:58 IST
Last Updated 10 ಜೂನ್ 2021, 9:58 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಇಂಟರ್‌ನೆಟ್‌ ಸೌಲಭ್ಯ ಇಲ್ಲದವರಿಗೂ ಲಸಿಕೆ ಪಡೆಯುವ ಹಕ್ಕಿದೆ. ಹೀ ಕೋವಿಡ್‌ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.ಗಾಗಿ ‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸದೇ, ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೂ

‘ಆನ್‌ಲೈನ್‌ ಮೂಲಕ ನೋಂದಣಿ ಕಡ್ಡಾಯ ಎಂಬುದು ಸರಿಯಲ್ಲ. ಲಸಿಕೆ ಕೇಂದ್ರಕ್ಕೆ ಬರುವ ಪ್ರತಿ ಅರ್ಹ ವ್ಯಕ್ತಿಗೂ ಲಸಿಕೆ ನೀಡಬೇಕು. ಇಂಟರ್‌ನೆಟ್‌ ಸೌಲಭ್ಯ ಹೊಂದಿರದವರೂ ಬದುಕುವ ಹಕ್ಕು ಹೊಂದಿದ್ದಾರೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌ ಲಸಿಕೆ ಪಡೆಯಲು ‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಮೊದಲಿನಿಂದಲೂ ಆಗ್ರಹಿಸುತ್ತಲೇ ಇದೆ.

ADVERTISEMENT

ಪಟ್ಟಣ–ನಗರ ಪ್ರದೇಶಗಳಿಂದ ದೂರ ವಾಸಿಸುತ್ತಿರುವವರು, ಗ್ರಾಮೀಣ ಪ್ರದೇಶದವರು ಹಾಗೂ ಬಡವರಲ್ಲಿ ಸ್ಮಾರ್ಟ್‌ಫೋನ್‌ ಇರುವುದಿಲ್ಲ. ಡಿಜಿಟಲ್‌ ಸಂಪರ್ಕದಿಂದ ವಂಚಿತ ಇವರಿಗೂ ಸಹ ಲಸಿಕೆ ನೀಡಬೇಕು ಎಂಬುದು ಪಕ್ಷದ ಪ್ರಮುಖ ಬೇಡಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.