ADVERTISEMENT

ಪುಣೆಯಲ್ಲಿ ಹೆಚ್ಚುತ್ತಿರುವ ಸೋಂಕು: ಮತ್ತೆ ಲಾಕ್‌ಡೌನ್‌ಗೆ ಜನಪ್ರತಿನಿಧಿಗಳ ಒತ್ತಾಯ

ಏಜೆನ್ಸೀಸ್
Published 8 ಜುಲೈ 2020, 5:09 IST
Last Updated 8 ಜುಲೈ 2020, 5:09 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಪುಣೆ: ಇಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತೆ ಲಾಕ್‌ಡೌನ್‌ ಮಾಡುವಂತೆ ಒತ್ತಾಯಿಸಿದ್ದಾರೆ.

ಆದರೆ, ಕೆಲವರು ಲಾಕ್‌ಡೌನ್‌ ಬೇಡ, ಸಮರ್ಪಕ ಆರೋಗ್ಯ ಸೇಮೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಹೇಳುತ್ತಿದ್ದಾರೆ.

ಚುನಾಯಿತ ಪ್ರತಿನಿಧಿಗಳು ದೀಘಿ, ಹಿಂಜೇವಾಡಿ, ದೇಹುಗಾಂವ್ ಮತ್ತು ಚಕನ್ ಪ್ರದೇಶಗಳಲ್ಲಿ 10 ದಿನಗಳವರೆಗೂ ಲಾಕ್‌ಡೌನ್‌ ಮಾಡಿದರೆ ವ್ಯಾಪಕವಾಗಿ ಸೋಂಕು ಹರಡುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಸೋಂಕು ಗ್ರಾಮೀಣ ಭಾಗಗಳಲ್ಲೂ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಲಾಕ್‌ಡೌನ್‌ ಅನಿವಾರ್ಯವಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿನ ಚಟುವಟಿಕೆಗಳಿಗೆ ಅನುಮತಿ ನೀಡಿ, ಲಾಕ್‌ಡೌನ್‌ ಮಾಡಬೇಕು ಎಂದು ಖೇಡ್ ಕ್ಷೇತ್ರದ ಶಾಸಕ ದಿಲೀಪ್ ಮೋಹಿತೆ ಪಾಟೀಲ್ ಹೇಳಿದ್ದಾರೆ.

ಆದರೆ, ಚಿಂಚ್ವಾಡ್ ಕ್ಷೇತ್ರದ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಹಾಗೂ ಎನ್ ಸಿಪಿ ಸಂಸದ ಡಾ.ಅಮೋಲ್ ಕೋಲ್ಹೆ ಅವರು ಈಗ ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಜನರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕು ಹಾಗೂ ಹೆಚ್ಚು ಹೆಚ್ಚು ಕೋವಿಡ್‌ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋಲ್ಹೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.