ADVERTISEMENT

ರಾಜಸ್ಥಾನ, ಛತ್ತೀಸಗಡ ಸಂಪುಟ ವಿಸ್ತರಣೆ

ಪಿಟಿಐ
Published 23 ಡಿಸೆಂಬರ್ 2018, 19:23 IST
Last Updated 23 ಡಿಸೆಂಬರ್ 2018, 19:23 IST

ಜೈಪುರ್‌: ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಗಳು ಸಂಪುಟ ವಿಸ್ತರಣೆಗೆ ಮುಂದಾಗಿವೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸೋಮವಾರ (ಡಿ.24) ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್‌ನ 22 ಶಾಸಕರು ಹಾಗೂ ರಾಷ್ಟ್ರೀಯ ಲೋಕದಳದ ಒಬ್ಬರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಚಿವರ ಪಟ್ಟಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಹಿರಿಯ ನಾಯಕರ ಅನುಮತಿ ಪಡೆದು ಗೆಹ್ಲೋಟ್‌ ಮತ್ತು ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಭಾನುವಾರ ದೆಹಲಿಯಿಂದ ಮರಳಿದ್ದಾರೆ.

ADVERTISEMENT

ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್‌ ಬಘೆಲ್‌ 25 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.